ಬೆಂಗಳೂರು: ಕುರುಬರ ಸಂಘದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ತೀವ್ರ ಮುಖಭಂಗವಾಗಿದೆ.
ಪ್ರದೇಶ ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಣದವರು ಜಯಗಳಿಸಿದ್ದು ಈಶ್ವರಪ್ಪ ಬಣದವರಿಗೆ ಸೋಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಜಿ. ಕೃಷ್ಣ ಆಯ್ಕೆಯಾಗಿದ್ದಾರೆ. ಕಾರ್ಯಧ್ಯಕ್ಷ ಸ್ಥಾನಕ್ಕೆ ಬಿ. ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿಯಾಗಿ ಡಿ. ವೆಂಕಟೇಶಮೂರ್ತಿ, ಖಜಾಂಚಿಯಾಗಿ ದೇವರಾಜ ಸುಬ್ಬರಾಯಪ್ಪ ಆಯ್ಕೆಯಾಗಿದ್ದಾರೆ.
ಚುನಾವಣೆಗೆ ಪಟ್ಟು ಹಿಡಿದಿದ್ದ ಈಶ್ವರಪ್ಪ ಬಣದವರಿಗೆ ಸೋಲಾಗಿದೆ. ಅವಿರೋಧ ಆಯ್ಕೆಗೆ ಸಿದ್ದರಾಮಯ್ಯ ಒಲವು ತೋರಿದ್ದರು. ಈಶ್ವರಪ್ಪ ಚುನಾವಣೆಗೆ ಪಟ್ಟುಹಿಡಿದಿದ್ದರು. 35 ಸ್ಥಾನಗಳಿಗೆ ಸಿದ್ದರಾಮಯ್ಯನವರ ಬಣದವರು ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.