
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿದ್ದು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಾಳೆ ಸಭೆ ನಡೆಸಲಾಗುವುದು. ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.