
ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲಾಗಿದೆ.
ಸಿದ್ದರಾಮಯ್ಯ ಅಕ್ರಮ ಡಿನೋಟಿಫಿಕೇಶನ್ ನಿಂದ ಲಾಭ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದ್ದು, ಇದನ್ನು ರದ್ದುಪಡಿಸುವಂತೆ ಕೋರಿ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ ಎಂದು ಹೇಳಲಾಗಿದೆ.