ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಂದು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. 15 ರಂದು ರಾಜರಾಜೇಶ್ವರಿ ನಗರದಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಜೆಪಿಯವರಿಗೆ ಇನ್ನೂ ಅಭ್ಯರ್ಥಿ ಆಯ್ಕೆ ಮಾಡಲು ಆಗುತ್ತಿಲ್ಲ. ಸ್ಥಳೀಯ ನಾಯಕರು ಅಭ್ಯರ್ಥಿಗಳನ್ನು ಒಪ್ಪಲು ತಯಾರಿಲ್ಲ. ಬಿಜೆಪಿಯಲ್ಲಿ ಅಭ್ಯರ್ಥಿ ವಿಚಾರವಾಗಿ ಸಂಘರ್ಷ ನಡೆಯುತ್ತಿದೆ, ಜೆಡಿಎಸ್ ಪಕ್ಷದಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ. ಬಿಜೆಪಿಯಲ್ಲಿ ಮೂಲ, ವಲಸಿಗರ ಮಧ್ಯೆ ಫೈಟ್ ನಡೆಯುತ್ತಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.