ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಮಾಹಿತಿ ನೀಡಿದ್ದಾರೆ. ದೇವಾಲಯಕ್ಕೆ ಬರುವ ಆದಾಯದ ದುರ್ಬಳಕೆಯನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ದೇವಾಲಯಕ್ಕೆ ಬರುವ ಭಕ್ತರು ನಗದು, ಚಿನ್ನಾಭರಣ ಕಾಣಿಕೆಯಾಗಿ ನೀಡುತ್ತಾರೆ. ಭಕ್ತರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯ. ದೇವಸ್ಥಾನದ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಬೇಕು ಎಂದು ತಿಳಿಸಿದ್ದಾರೆ.