ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕೊಳಗೇರಿಯಲ್ಲಿ ವಾಸವಾಗಿರುವ ಮೂರು ಲಕ್ಷ ಕುಟುಂಬಗಳಿಗೆ ಸರ್ಕಾರ ಕೊಡುಗೆ ನೀಡಿದೆ.
ಸ್ಲಂ ನಿವಾಸಿಗಳಿಗೆ ಸರ್ಕಾರದಿಂದ ಕೊಡುಗೆ ನೀಡಲಾಗಿದ್ದು, 1873 ಕೊಳಚೆ ಪ್ರದೇಶಗಳ 6745 ಎಕರೆ ಹಂಚಿಕೆ ಮಾಡಲಾಗಿದೆ. ಸುಮಾರು 16 ಲಕ್ಷ ಕೊಳಗೇರಿ ನಿವಾಸಿಗಳಿಗೆ ಪ್ರಯೋಜನ ಸಿಗಲಿದೆ. ಮೂರು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ವಸತಿ ಸಚಿವ ಸೋಮಣ್ಣ ಕಳೆದ ಆರು ತಿಂಗಳಿಂದ ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಸಂಪುಟದ ಅನುಮೋದನೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಹಬ್ಬದ ವೇಳೆಯಲ್ಲೇ ಸ್ಲಂ ನಿವಾಸಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಜ್ಯದ ವಿವಿಧ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದಲ್ಲಿರುವ 1873 ಕೊಳಚೆ ಪ್ರದೇಶಗಳ ಸುಮಾರು 3.13 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎನ್ನಲಾಗಿದೆ.