alex Certify ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ವತಿಯಿಂದ ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು.

ಅಭಿಯಾನದ ರಾಜ್ಯ ನಿರ್ದೇಶಕರಾದ ಚಾರುಲತಾ ಸೋಮಲ್ ಅವರು, ಆರೋಗ್ಯ ಇಲಾಖೆಯ ಆಯುಕ್ತರೊಂದಿಗೆ ಈ ಕುರಿತಾಗಿ ಚರ್ಚೆ ನಡೆಸಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸುವ ಕುರಿತು ನೆರವು ನೀಡುವುದಾಗಿ ಹೇಳಿದ್ದಾರೆ.

ಬೆಳಗಾವಿಯ ವಂಟಮುರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 30 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದ್ದು ಟ್ರಾಮಾ ಕೇಂದ್ರವನ್ನು ಕೂಡ ಸೇವೆಗೆ ಸಜ್ಜುಗೊಳಿಸಲಾಗಿದೆ. ಅದೇ ರೀತಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 37 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಎರಡು ಹಂತಗಳ ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಡಿಜಿಟಲ್ ನರ್ವ್ ಸೆಂಟರ್, ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್ ಹೆಲ್ತ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಅಭಿಯಾನದಡಿ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...