alex Certify ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮಹಿಳೆಯೊಬ್ಬರು ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಕಾಲಿಗೆ ಹಾವು ಕಚ್ಚಿದೆ.

ಕಚ್ಚಿದ ಹಾವನ್ನು ಕೊಂದ ಅವರು ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಯಾವ ಹಾವು ಕಡಿದಿದೆ ಎನ್ನುವುದು ಗೊತ್ತಾದರೆ ವೈದ್ಯರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂಬ ಕಾರಣದಿಂದ ಕಚ್ಚಿದ ಹಾವನ್ನು ಕೊಂದು ತಂದಿರುವುದಾಗಿ ಮಹಿಳೆ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...