alex Certify ಬಿಗ್ ನ್ಯೂಸ್: ವಿಧಾನಸಭಾ ಅಧಿವೇಶನ, ವ್ಯವಸ್ಥೆಗಳ ಪರಿಶೀಲಿಸಿದ ಸ್ಪೀಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ವಿಧಾನಸಭಾ ಅಧಿವೇಶನ, ವ್ಯವಸ್ಥೆಗಳ ಪರಿಶೀಲಿಸಿದ ಸ್ಪೀಕರ್

ಬೆಂಗಳೂರು: ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸದನದಲ್ಲಿ ರಾಜ್ಯ ಸಚಿವ ಸಂಪುಟದ ಸದಸ್ಯರು ಮತ್ತು ಸದನದ ಸದಸ್ಯರು, ಸದನದಲ್ಲಿ ಹಾಜರಿರುವ ಅಧಿಕಾರಿಗಳು ಹಾಗೂ ಮಾಧ್ಯಮದವರ ಆರೋಗ್ಯಕ್ಕೆ ಕೋವಿಡ್-19 ರ ಸೋಂಕು ತಗುಲದಂತೆ ಕ್ರಮ ವಹಿಸುವುದು ಹೇಗೆ? ಎಂಬುದರ ಕುರಿತು ರಾಜ್ಯ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಸದನದಲ್ಲಿನ ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಕೋವಿಡ್-19 ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವನ್ನು ನಡೆಸುವುದು ಹೇಗೆ? ಎಂಬ ಬಗ್ಗೆ ವಿವಿಧ ಸ್ತರಗಳಲ್ಲಿ ವಿಸ್ತೃತ ಚರ್ಚೆಗಳು ನಡೆಯುತ್ತಿವೆ. ರಾಜ್ಯದ ರಾಜಧಾನಿಯ ವಿಧಾನ ಸೌಧ ಹೊರತುಪಡಿಸಿ ಬೇರೆಲ್ಲಾದರೂ ಅಧಿವೇಶನ ನಡೆಸಲು ಸೂಕ್ತ ಸ್ಥಳ ಇದೆಯೇ ? ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.  ವಿಧಾನ ಸೌಧದ ಮೊದಲನೇಯ ಮಹಡಿಯಲ್ಲಿರುವ ವಿಧಾನ ಸಭಾ ಸಭಾಂಗಣದಲ್ಲಿ ಪ್ರಸ್ತುತ ಇರುವ ಆಸನ ವ್ಯವಸ್ಥೆಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗಾಜಿನ ಕವಚಗಳನ್ನು ಅಳವಡಿಸಿದರೆ ಹೇಗೆ ? ಸದನಕ್ಕೆ ಆಗಮಿಸುವ ಮುಖ್ಯಮಂತ್ರಿಗಳೂ ಒಳಗೊಂಡಂತೆ ಅವರ ಸಂಪುಟದ ಎಲ್ಲಾ ಸದಸ್ಯರು, ಪ್ರತಿಪಕ್ಷ ನಾಯಕರೂ ಒಳಗೊಂಡಂತೆ ಸದನದ ಎಲ್ಲಾ ಸದಸ್ಯರೂ ಅಧಿವೇಶನವು ನಡೆಯುವ ದಿನಗಳಂದು ಕಡ್ಡಾಯವಾಗಿ ಮುಖಗವಸು ಒದಗಿಸುವುದು ಹಾಗೂ ಮುಖ ರಕ್ಷಕಗಳನ್ನು ಧರಿಸಿಬರಬೇಕೆಂದು ವಿನಂತಿಸುವುದರ ಬಗ್ಗೆ ಅಧಿಕಾರಿಗಳು ತಮಗೆ ಸಲಹೆ ನೀಡಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪರಿಶೀಲನೆ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆ ಹಾಗೂ ಇತರೆ ರಾಜ್ಯಗಳಲ್ಲಿನ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಸಮಾವೇಶಗೊಳ್ಳಲು ಹೇಗೆ ಸಿದ್ದತೆಗಳನ್ನು ನಡೆಸುತ್ತಿವೆ? ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಮುಂದಿನ ವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿ ಸ್ಥಳ ನಿಷ್ಕರ್ಷೆ ಮಾಡುವುದಾಗಿಯೂ ಸಭಾಧ್ಯಕ್ಷರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...