ಯಾದಗಿರಿ: ನನ್ನನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯನ್ನಾಗಿ ಮಾಡು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ದೇವರ ಮೊರೆ ಹೋಗಿದ್ದಾರೆ.
ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿಗೆ ಪತ್ರ ಬರೆದಿರುವ ಶ್ರೀರಾಮುಲು ತಮ್ಮನ್ನು ಉಪಮುಖ್ಯಮಂತ್ರಿ ಮಾಡುವಂತೆ ಕೋರಿಕೆ ಸಲ್ಲಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲ್ಬುರ್ಗಿಗೆ ಆಗಮಿಸಿದ ಶ್ರೀರಾಮುಲು ದೇವಿಯ ದರ್ಶನ ಪಡೆದುಕೊಂಡಿದ್ದು ತಮ್ಮನ್ನು ಉಪಮುಖ್ಯಮಂತ್ರಿ ಮಾಡುವಂತೆ ಪತ್ರ ಬರೆದು ಕೋರಿಕೆ ಸಲ್ಲಿಸಿದ್ದಾರೆ. ಈ ಹಿಂದೆಯೇ ಶ್ರೀರಾಮುಲು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗಿತ್ತಾದರೂ ಬದಲಾದ ರಾಜಕೀಯ ಬೆಳವಣಿಗೆಗಳಿಂದ ಸಾಧ್ಯವಾಗಿರಲಿಲ್ಲ. ಆಗಾಗ ತಮ್ಮ ತಾವು ಉಪ ಮುಖ್ಯಮಂತ್ರಿಯಾಗುವ ಬಗ್ಗೆ ಶ್ರೀರಾಮುಲು ಇಂಗಿತ ವ್ಯಕ್ತಪಡಿಸಿದ್ದಾರೆ.