alex Certify ‘ಕೊರೊನಾ’ ಆತಂಕದ ನಡುವೆ ಸಚಿವರ ಆಪ್ತ ಸಹಾಯಕನಿಂದ ಗುಂಡು – ತುಂಡಿನ ಪಾರ್ಟಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ ಆತಂಕದ ನಡುವೆ ಸಚಿವರ ಆಪ್ತ ಸಹಾಯಕನಿಂದ ಗುಂಡು – ತುಂಡಿನ ಪಾರ್ಟಿ…!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಹೀಗಾಗಿ ಆತಂಕಗೊಂಡಿರುವ ರಾಜ್ಯ ಸರ್ಕಾರ, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯದಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿಗೊಳಿಸಿದೆ.

ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡರೂ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸಾರ್ವಜನಿಕರ ನಿರ್ಲಕ್ಷ, ಕೆಲ ಜನಪ್ರತಿನಿಧಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣವಾಗಿದ್ದು, ಇದರ ಮಧ್ಯೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ತಮ್ಮ ಹುಟ್ಟುಹಬ್ಬದಂದು ಭರ್ಜರಿ ಗುಂಡು – ತುಂಡಿನ ಪಾರ್ಟಿ ನಡೆಸಿರುವುದು ಬಹಿರಂಗವಾಗಿದೆ.

ಶಿವನ ಗೌಡರ, ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕರಾಗಿದ್ದು ಇವರು ಶುಕ್ರವಾರದಂದು ಗದಗದ ಶ್ರೀನಿವಾಸ ಭವನದಲ್ಲಿ ಹುಟ್ಟುಹಬ್ಬದ ನಿಮಿತ್ತ ಪಾರ್ಟಿ ನೀಡಿದ್ದಾರೆ. ಇದರಲ್ಲಿ 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಯಾರೊಬ್ಬರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ತಡರಾತ್ರಿಯವರೆಗೆ ಪಾರ್ಟಿ ನಡೆಸಿ ಕುಣಿದು ಕುಪ್ಪಳಿಸಿದ್ದಾರೆ. ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...