‘ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸವಾಲು ಹಾಕಿದ್ದಾರೆ. ಶ್ರೀರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ಣ ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ.’ ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣ ಪರಿಕರಗಳ ಖರೀದಿಯಲ್ಲಿ ಲೂಟಿ ಹೊಡೆದಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಬೀತುಪಡಿಸಲಿ ಎಂದು ಸಚಿವ ಶ್ರೀರಾಮುಲು ಸವಾಲ್ ಹಾಕಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ನೆರವು ನೀಡುತ್ತಿದೆ ಎನ್ನುವುದನ್ನು ಪ್ರಧಾನಿಯವರಿಗೆ ಕೇಳಬೇಕಲ್ಲವೇ? ರಾಜ್ಯಕ್ಕೆ ಪಿಎಂ ಕೇರ್ಸ್ ನಿಧಿಯಿಂದ ಎಷ್ಟು ಹಣ ಕಳುಹಿಸಲಾಗಿದೆ ಎಂದು ವಿಚಾರಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಸುಳ್ಳು ಆಶ್ವಾಸನೆ ನೀಡಿದ್ದರೂ ನೊಂದ ಜನರಿಗೆ ಸ್ವಲ್ಪ ನೆಮ್ಮದಿ ಸಿಗುತ್ತಿತ್ತು ಎಂದು ಹೇಳಿರುವ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ತ್ರಿಮೂರ್ತಿ ಸಚಿವರನ್ನು ನೇಮಿಸಿರುವುದು ಸೋಂಕಿತರಿಗೆ ನೆರವಾಗಲೇ? ಅಥವಾ ಭಿನ್ನಾಭಿಪ್ರಾಯ ಶಮನ ಮಾಡಲೇ ಎಂದು ಪ್ರಶ್ನಿಸಿದ್ದಾರೆ.
ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದು, ಬಳ್ಳಾರಿಯ ನಿಮ್ಮ ಅಣ್ಣ ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.