ಈ ಬಾರಿಯ 10 ನೇ ತರಗತಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಜೂನ್ 14 ರಿಂದ ಜೂನ್ 25 ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಪರೀಕ್ಷಾ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದಾರೆ. ಅಲ್ಲದೆ ಈ ಬಾರಿಯ ಪರೀಕ್ಷಾ ಅವಧಿ 3 ಗಂಟೆ 15 ನಿಮಿಷ ಎಂದು ಸಚಿವರು ತಿಳಿಸಿದ್ದಾರೆ.