ಕೊರೊನಾ ವೈರಸ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಈ ಕಾರ್ಯದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ ತಮ್ಮನ್ನು ತೊಡಗಿಸಿಕೊಂಡಿದ್ದರು.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ, ಪರೀಕ್ಷಾ ಕೇಂದ್ರದಲ್ಲಿ ಅವರುಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವ ಸಲುವಾಗಿ ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಇಬ್ಬರು ಮತ್ತು ಉಪ ಪರೀಕ್ಷಾ ಕೇಂದ್ರಗಳಲ್ಲಿ ಓರ್ವ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.
ಇದೀಗ ಈ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ಸಂಭಾವನೆ ರೂಪದಲ್ಲಿ 36.52 ಲಕ್ಷ ರೂಪಾಯಿಗಳನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ. ಓರ್ವ ಆಶಾ ಕಾರ್ಯಕರ್ತೆಯರಿಗೆ ದಿನಕ್ಕೆ 100 ರೂ. ಗಳಂತೆ ಭತ್ಯೆ ನೀಡಲಾಗಿದೆ.