alex Certify SSLC ಪರೀಕ್ಷೆ ಕುರಿತಂತೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಕುರಿತಂತೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಈ ಹಿಂದೆ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಇದೀಗ ಪರೀಕ್ಷೆಗೆ ದಿನಾಂಕ ನಿಗದಿಮಾಡಿ ವೇಳಾ ಪಟ್ಟಿಯನ್ನೂ ಪ್ರಕಟಿಸಲಾಗಿದೆ.

ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿ ಇತ್ಯರ್ಥವಾಗಿರುವುದರಿಂದ ನಿಗದಿಯಂತೆಯೇ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಉತ್ತಿರ್ಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವ ಸಚಿವ ಸುರೇಶ್ ಕುಮಾರ್, ಹೀಗಾಗಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಕೆಲವರು ಉದ್ದೇಶಪೂರ್ವಕವಾಗಿ ಪರೀಕ್ಷೆ ಕುರಿತಂತೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಹತ್ತನೇ ತರಗತಿ ಪರೀಕ್ಷೆಗಳು ಈಗಾಗಲೇ ನಿಗದಿಯಾಗಿರುವ ದಿನಾಂಕದಂದು ನಡೆಯಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...