ನಾಳೆಯಿಂದ 10ನೇ ತರಗತಿ ಪರೀಕ್ಷೆಗಳು ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಪೋಷಕರಿಗೆ ಕೆಲವೊಂದು ಮಹತ್ವದ ಸೂಚನೆಗಳನ್ನು ನೀಡಿದೆ.
* ವಿದ್ಯಾರ್ಥಿಯು ಪರೀಕ್ಷೆಗೆ ಅಗತ್ಯವಾದ ಪ್ರವೇಶ ಪತ್ರ ಹಾಗೂ ಇತರೆ ಸಲಕರಣೆಗಳೊಂದಿಗೆ ಹಾಜರಾಗುವಂತೆ ತಿಳಿಸುವುದು.
* ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ನಿಗಾ ವಹಿಸುವುದು.
* ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರಸ್ಪರ 1ಮೀಟರ್ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ತಿಳಿಸುವುದು. ಹೀಗಾಗಿ ನಿಗದಿತ ಸಮಯಕ್ಕಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು.
* ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬರುವುದರಿಂದ ಪ್ರತ್ಯೇಕ ಆಹಾರದ ಡಬ್ಬಿ, ನೀರಿನ ಬಾಟಲ್, ಕರವಸ್ತ್ರ ಹಾಗೂ ಮಳೆಗಾಲವಾಗಿರುವ ಕಾರಣ ಕೊಡೆಯನ್ನು ವಿದ್ಯಾರ್ಥಿಗಳ ಜೊತೆ ಕಳುಹಿಸಿಕೊಡುವುದು.
* ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಹಾಗೂ ಸ್ಯಾನಿಟೈಸರ್ ನಿಂದ ಕೈಗಳನ್ನು ಸ್ವಚ್ಛ ಮಾಡಿಕೊಳ್ಳುವಂತೆ ತಿಳಿಸುವುದು.
* ಪರೀಕ್ಷೆಗೆ ಮುನ್ನ ವಿದ್ಯಾರ್ಥಿಗೆ ಜ್ವರ, ಕೆಮ್ಮು, ನೆಗಡಿಯ ಲಕ್ಷಣಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳುವುದು.
* ಇತರೆ ಪರೀಕ್ಷಾರ್ಥಿಗಳೊಂದಿಗೆ ಕೈ ಕುಲುಕುವುದು, ಅಪ್ಪಿಕೊಳ್ಳುವುದು, ಮುಟ್ಟುವುದು ಮತ್ತು ಎಲ್ಲೆಂದರಲ್ಲಿ ಉಗುಳದಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು.
* ಕೆಮ್ಮುವಾಗ, ಸೀನುವಾಗ, ಮೂಗು ಮತ್ತು ಬಾಯಿಗೆ ಕರವಸ್ತ್ರವನ್ನು ಬಳಸುವಂತೆ ತಿಳುವಳಿಕೆ ನೀಡುವುದು.
* ಪರೀಕ್ಷಾ ಕೇಂದ್ರದಲ್ಲಿ ಬಾಗಿಲು, ಕಿಟಕಿಗಳು ಹಾಗೂ ಇತರ ಯಾವುದೇ ವಸ್ತುಗಳನ್ನು ಅನಗತ್ಯವಾಗಿ ಮುಟ್ಟದಂತೆ ಮತ್ತು ಸಹ ವಿದ್ಯಾರ್ಥಿಗಳಿಂದ ಯಾವುದೇ ವಸ್ತುಗಳನ್ನು ಪಡೆಯದಂತೆ ತಿಳುವಳಿಕೆ ನೀಡುವುದು.
* ಪರೀಕ್ಷಾ ಕೇಂದ್ರದಲ್ಲಿ ಶೌಚಾಲಯ ಬಳಸಿದ ನಂತರ ಸೋಪು ಮತ್ತು ನೀರಿನಿಂದ ಕೈ ತೊಳೆಯುವಂತೆ ತಿಳಿಸುವುದು.
* ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಬಳಿ ಗುಂಪು ಸೇರಬಾರದು ಹಾಗೂ 200 ಮೀಟರ್ ಅಂತರದಲ್ಲಿರುವ ಬ್ಯಾರಿಕೇಡ್ ಹೊರಗಡೆ ಉಳಿಯುವುದು.
* ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಸಂದರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಕ್ತ ತಿಳುವಳಿಕೆಯನ್ನು ವಿದ್ಯಾರ್ಥಿಗಳಿಗೆ ನೀಡುವುದು.