alex Certify SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಈ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ.

ಜೂನ್ 25ರಿಂದ ಜುಲೈ 4 ರ ವರೆಗೂ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಪ್ರತಿ ವಿಷಯಕ್ಕೂ ಒಂದು ದಿನದ ಗ್ಯಾಪ್ ಇರುತ್ತದೆ ಎಂದು ಹೇಳಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಮಾಸ್ಕ್ ಹಾಗೂ ಸ್ಯಾನಿಟೈಸರ್ ಒದಗಿಸಲಿದ್ದು, ಪರೀಕ್ಷಾ ಕೊಠಡಿ ಪ್ರವೇಶಕ್ಕೂ ಮುನ್ನ ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತದೆ.

ಹೀಗಾಗಿ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿ ಅಂದರೆ ಬೆಳಗ್ಗೆ 9-30 ಕ್ಕೆ ಹಾಜರಾಗಬೇಕಾಗಿದ್ದು, ವೈದ್ಯಕೀಯ ತಪಾಸಣೆಗೆ ಒಳಪಟ್ಟ ನಂತರ 10-30 ಕ್ಕೆ ಆರಂಭವಾಗುವ ಪರೀಕ್ಷೆಗೆ ಹೋಗಬೇಕಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...