alex Certify SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಲಾಕ್ಡೌನ್ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯನ್ನು ಈಗ ನಿಗದಿಪಡಿಸಲಾಗಿದ್ದು, ಹತ್ತನೇ ತರಗತಿ ಪರೀಕ್ಷೆಗಳು ಜೂನ್ 25ರಿಂದ ಆರಂಭವಾಗಲಿದ್ದು, ಪಿಯುಸಿ ಪರೀಕ್ಷೆ ಜೂನ್ 18ರಂದು ನಡೆಯಲಿದೆ. ಪರೀಕ್ಷೆ ನಡೆಸುವ ಸಲುವಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ನೀಡಲಾಗುತ್ತದೆ. ಜೊತೆಗೆ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡುವುದರೊಂದಿಗೆ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ಆದ್ಯತೆ ನೀಡಲಾಗುತ್ತದೆ.

ಪರೀಕ್ಷೆ ಹಾಲ್ ಪ್ರವೇಶಿಸುವ ಮುನ್ನ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲು ನಿರ್ಧರಿಸಲಾಗಿದ್ದು, ನಿಗದಿತ ಉಷ್ಣಾಂಶಗಿಂತ ಜಾಸ್ತಿ ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಊರುಗಳಿಗೆ ತೆರಳಿದ್ದರೆ ಅಂತವರಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ.

ಕಂಟೈನ್ಮೆಂಟ್ ಜೋನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ದಿನಾಂಕ ನಿಗದಿಪಡಿಸಿ ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...