alex Certify SSLC ಪರೀಕ್ಷೆ ರದ್ದು ಮಾಡುವಂತೆ ಕೋರಿ ಪಿಐಎಲ್ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ರದ್ದು ಮಾಡುವಂತೆ ಕೋರಿ ಪಿಐಎಲ್ ಸಲ್ಲಿಕೆ

ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡ ಪರಿಣಾಮ ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದರಿಂದ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

ಇದೀಗ 10ನೇ ತರಗತಿ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದ್ದು, ಜೂನ್ 25ರಿಂದ ಆರಂಭವಾಗಲಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡುವುದರ ಜೊತೆಗೆ ಸ್ಯಾನಿಟೈಸರ್ ನೀಡಲಾಗುತ್ತದೆ.

ಇದರ ಮಧ್ಯೆ ವಕೀಲ ಎಂ. ಲೋಕೇಶ್ ಎಂಬವರು ಸೇರಿ ಮೂರು ಮಂದಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆ 10ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆಯ ತೀರ್ಮಾನವನ್ನು ಪ್ರಶ್ನಿಸಿದ್ದಾರೆ.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿಯವರನ್ನು ಪ್ರತಿ ವಾದಿಯನ್ನಾಗಿಸಲಾಗಿದ್ದು, ಅರ್ಜಿಯ ವಿಚಾರಣೆ ನಡೆಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...