ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದೆ. ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ಶೇಕಡಾ 71.80 ಫಲಿತಾಂಶ ಬಂದಿದೆ. ಈ ಬಾರಿ 5,82,316 ಮಂದಿ ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳ ಫಲಿತಾಂಶ ಶೇಕಡಾ 72.79ರಷ್ಟು ಬಂದಿದೆ.
ಆರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 11 ಮಂದಿ ವಿದ್ಯಾರ್ಥಿಗಳು 624 ಅಂಕ ಪಡೆದಿದ್ದಾರೆ. 43 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ ಬಂದಿದೆ. ಬೆಂಗಳೂರು ಗ್ರಾಮಾಂತರ ದ್ವಿತೀಯ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆ ಸ್ಥಾನದಲ್ಲಿದೆ. ಬೆಂಗಳೂರಿನ ಚಿರಾಯು, ನಿಖಿಲೇಶ್, ಮಂಡ್ಯದ ಧೀರಜ್ ರೆಡ್ಡಿ, ಸುಳ್ಯದ ಅನುಷಾ, ಶಿರಸಿಯ ಸನ್ನಿದಿ 625ಕ್ಕೆ 625 ಅಂಕ ಪಡೆದಿದ್ದಾರೆ.
ಶಿಕ್ಷಣ ಇಲಾಖೆಯ ಎರಡು ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಎಸ್ ಎಂ ಎಸ್ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಬಹುದಾಗಿದೆ. ನಾಳೆ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟ. ಪ್ರಾವಿಷನ್ ಮಾರ್ಕ್ಸ್ ಕಾರ್ಡ್ ನಾಳೆ ಸಿಗಲಿದೆ. ಕೊರೊನಾ ಆತಂಕದ ಮಧ್ಯೆ ಪರೀಕ್ಷೆ ನಡೆದಿತ್ತು. ಜೂನ್ 24ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆದಿತ್ತು. 8,11,050 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. 18 ಸಾವಿರ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯುತ್ತಿದ್ದಾರೆ.