ಬೆಂಗಳೂರು: ರಾಜ್ಯದಲ್ಲಿ ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಯನ್ನು ರದ್ದು ಮಾಡಲಾಗುವುದು ಎಂದು ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಿಮಿನಲ್ ಕೇಸು ದಾಖಲಿಸಲಾಗುವುದು.
ಶಿಕ್ಷಣ ಇಲಾಖೆಯಿಂದ ಈ ಕುರಿತಾಗಿ ಎಚ್ಚರಿಕೆ ನೀಡಲಾಗಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಪರೀಕ್ಷೆ ರದ್ದಾಗಿದೆ ಎಂದು ಸುಳ್ಳು ವದಂತಿ ಹರಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಲಾಗಿದೆ.
ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಟ್ಟುನಿಟ್ಟಿನ ಕ್ರಮ, ವಿದ್ಯಾರ್ಥಿಗಳ ಸುರಕ್ಷತೆ ಕಾಪಾಡಿಕೊಂಡು ಪರೀಕ್ಷೆ ನಡೆಸಲಿದೆ. ಜಿಲ್ಲೆ, ತಾಲೂಕು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಿಬ್ಬಂದಿ ಪ್ರಮಾಣಿತ ಕಾರ್ಯಾಚರಣೆಯ ವಿಧಾನ ಅನ್ವಯ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ನಿಗದಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವಿಚಾರವಾಗಿ ಗೊಂದಲ ಸುಳ್ಳು ಸುದ್ದಿಯನ್ನು ಹರಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪರೀಕ್ಷೆ ಆರಂಭಕ್ಕೆ ಮೊದಲು ಸುಳ್ಳು ಸುದ್ದಿ ಹರಡಿದರೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ನಿಗಾ ವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ಹೇಳಿದ್ದಾರೆ.