alex Certify SSLC ಪರೀಕ್ಷೆ ನಡೆಯುವುದೇ ಅನುಮಾನವೆಂದು ಗೊಂದಲ ಸೃಷ್ಟಿ: ಪರೀಕ್ಷೆ ರದ್ದಾಗಲ್ಲ – ಸಚಿವರ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ನಡೆಯುವುದೇ ಅನುಮಾನವೆಂದು ಗೊಂದಲ ಸೃಷ್ಟಿ: ಪರೀಕ್ಷೆ ರದ್ದಾಗಲ್ಲ – ಸಚಿವರ ಸ್ಪಷ್ಟನೆ

ಚಾಮರಾಜನಗರ: ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗುವುದಿಲ್ಲ. ನಡೆದೇ ನಡೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಮೇ 3ರವರೆಗೆ ಲಾಕ್ಡೌನ್ ಜಾರಿಯಲ್ಲಿದ್ದು ಲಾಕ್ಡೌನ್ ಮುಗಿದ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವುದು ಅನುಮಾನ ಎಂದು ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗುವುದಿಲ್ಲ, ನಡೆದೇ ನಡೆಯುತ್ತದೆ. ಮಕ್ಕಳಲ್ಲಿ ಯಾವುದೇ ಗೊಂದಲ ಇಲ್ಲ, ಅವರು ಪರೀಕ್ಷೆಗೆ ಸಿದ್ಧರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆಗಿಂತಲೂ ಕೋರೋನಾ ವಿರುದ್ಧ ಹೋರಾಟ ನಡೆಸುವುದು ದೊಡ್ಡ ಪರೀಕ್ಷೆಯಾಗಿದೆ. ಮೇ 3ರ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...