alex Certify SSLC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಚಿವರಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಚಿವರಿಂದ ಮುಖ್ಯ ಮಾಹಿತಿ

ಚಾಮರಾಜನಗರ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳು ಮುಂದೂಡಿಕೆಯಾಗಿವೆ.

ಮೇ 3 ರವರೆಗೂ ಲಾಕ್ಡೌನ್ ಜಾರಿಯಲ್ಲಿದ್ದು ಮೇ 3 ರ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಗಿಂತಲೂ ಕೊರೋನಾ ವಿರುದ್ಧ ಹೋರಾಟ ನಡೆಸುವುದು ದೊಡ್ಡ ಪರೀಕ್ಷೆಯಾಗಿದೆ. ಮೇ 3ರ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೆಲವರು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವುದು ಅನುಮಾನ ಎಂದು ಗೊಂದಲ ಮೂಡಿಸುತ್ತಿದ್ದಾರೆ. ಮಕ್ಕಳಲ್ಲಿ ಗೊಂದಲವಿಲ್ಲ. ಮಕ್ಕಳು ಪರೀಕ್ಷೆಗೆ ತಯಾರಾಗಿದ್ದಾರೆ. ಮೇ 3 ರ ಬಳಿಕ ಪರೀಕ್ಷೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪೋಷಕರು ಮತ್ತು ವಿದ್ಯಾರ್ಥಿಗಳ ಗೊಂದಲ ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...