ಬೆಂಗಳೂರು: ಎಸ್ಎಸ್ಎಲ್ಸಿ ನಕಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ಕಾರ್ಯದರ್ಶಿಯಿಂದ ದೂರು ನೀಡಲಾಗಿದೆ.
ಬೆಂಗಳೂರು ಉತ್ತರ ವಿಭಾಗದ ಸಿಇಎನ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಾದರಿ ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದ ಕುರಿತಾಗಿ ಕೇಸು ದಾಖಲಿಸಲಾಗಿದೆ ಎನ್ನಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಕ್ಕೂ ಮೊದಲು ನಕಲಿ ಪ್ರಶ್ನೆಪತ್ರಿಕೆ ಹರಿದಾಡುತ್ತಿರುವ ಬಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅಲ್ಲದೆ, ಇಂತಹ ವದಂತಿಗಳ ಬಗ್ಗೆ ಯಾವ ಪೋಷಕರು, ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದರು. ಸಚಿವರ ಸೂಚನೆ ಅನ್ವಯ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.