ಬೆಂಗಳೂರು: ನಾಳೆಯಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂಟೇನ್ಮೆಂಟ್ ಜೋನ್ ನಿಂದ 26 ಪರೀಕ್ಷಾ ಕೇಂದ್ರಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಪಾಸಿಟಿವ್ ಇರುವ 10 ಮಕ್ಕಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪೂರಕ ಪರೀಕ್ಷೆಯಲ್ಲಿ ಹೊಸ ಅಭ್ಯರ್ಥಿಗಳ ರೀತಿ ಅವಕಾಶ ನೀಡಲಾಗುವುದು. ಕ್ವಾರಂಟೈನ್ ಕೇಂದ್ರದಲ್ಲಿದ್ದ 9 ಮಕ್ಕಳು ಪರೀಕ್ಷೆ ಬರೆಯಬೇಕಿತ್ತು. ಕ್ವಾರಂಟೈನ್ ನಲ್ಲಿ ಇದ್ದವರಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಇವರಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪರೀಕ್ಷೆಯ ಅರ್ಧದಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡರೆ ನಂತರದ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಆಗಸ್ಟ್ ನಲ್ಲಿ ಉಳಿದ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇವರನ್ನು ಹೊಸ ವಿದ್ಯಾರ್ಥಿಯಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.