alex Certify SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್

ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು ವೆಬ್ಸೈಟ್ ಮತ್ತು ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಇದರೊಂದಿಗೆ ವಿದ್ಯಾರ್ಥಿಗಳು ನೊಂದಾಯಿಸಿದ ಮೊಬೈಲ್ ಸಂಖ್ಯೆಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಆಗಸ್ಟ್ 10 ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲಿದ್ದು ವಿದ್ಯಾರ್ಥಿಗಳ ಮೊಬೈಲ್ ಫೋನ್ ಗೆ ಎಸ್ಎಂಎಸ್ ಮೂಲಕ ಸಂದೇಶ ರವಾನಿಸಲಾಗುವುದು. ಮನೆಯಲ್ಲೇ ಕುಳಿತುಕೊಂಡು ವಿದ್ಯಾರ್ಥಿಗಳು ಫಲಿತಾಂಶ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಅನುತ್ತೀರ್ಣಗೊಂಡ ಮತ್ತು ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಸೆಪ್ಟೆಂಬರ್ ನಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಹಾಜರಾಗಬಹುದಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...