ಕೋಲಾರ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ ಸೋಂಕು ತಗಲಿದೆ. ಬಾಲ್ಯವಿವಾಹ ಆರೋಪದಡಿ ಬಾಲಮಂದಿರದಲ್ಲಿ ಆಶ್ರಯ ಪಡೆದುಕೊಂಡಿದ್ದ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿತ್ತು. ಪರೀಕ್ಷೆ ಬರೆಯಲು ಎರಡು ದಿನಗಳ ಹಿಂದೆ ಮನೆಗೆ ಕರೆತರಲಾಗಿತ್ತು.
ವಿದ್ಯಾರ್ಥಿನಿಗೆ ನಾಳೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.