alex Certify ನಾಳೆಯಿಂದ ‘SSLC’ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ‘SSLC’ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಶಾಕ್

ಕೋಲಾರ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ ಸೋಂಕು ತಗಲಿದೆ. ಬಾಲ್ಯವಿವಾಹ ಆರೋಪದಡಿ ಬಾಲಮಂದಿರದಲ್ಲಿ ಆಶ್ರಯ ಪಡೆದುಕೊಂಡಿದ್ದ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿತ್ತು. ಪರೀಕ್ಷೆ ಬರೆಯಲು ಎರಡು ದಿನಗಳ ಹಿಂದೆ ಮನೆಗೆ ಕರೆತರಲಾಗಿತ್ತು.

ವಿದ್ಯಾರ್ಥಿನಿಗೆ ನಾಳೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...