ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ.
ಜುಲೈ 4 ರ ವರೆಗೆ ಪರೀಕ್ಷೆ ನಡೆಯಲಿದ್ದು ಶಿಕ್ಷಣ ಇಲಾಖೆಯಿಂದ ಮಕ್ಕಳ ಸುರಕ್ಷತೆಗಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3209 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಲಾಗಿದೆ. 81265 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುವುದು. ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಒಂದೂವರೆ ಗಂಟೆ ಮುಂಚೆ ಪರೀಕ್ಷಾ ಕೇಂದ್ರಕ್ಕೆ ಹೋಗಿ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ.
ಯಾವುದೇ ಆತಂಕ, ಭಯವಿಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ, ಒತ್ತಡಕ್ಕೆ ಸಿಲುಕದೇ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಜಾಗರೂಕತೆ ವಹಿಸಬೇಕು. ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.