alex Certify SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಲಾಗಿದೆ. ಮೇ 3 ರ ನಂತರ  ತೀರ್ಮಾನ ಕೈಗೊಳ್ಳುವುದಾಗಿ ಹೇಳಲಾಗಿದ್ದರೂ. ಲಾಕ್ಡೌನ್ ಮುಂದುವರೆದಿರುವುದರಿಂದ ವಿದ್ಯಾರ್ಥಿಗಳು ಪೋಷಕರು ಪರೀಕ್ಷೆ ದಿನಾಂಕವನ್ನೇ ಕಾಯುವಂತಾಗಿದೆ.

ಲಾಕ್ ಡೌನ್ ಮುಗಿದ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಲಾಗಿದೆ. ಅದೇ ರೀತಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್, ಲಾಕ್ ಡೌನ್ ಬಳಿಕ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಲಾಕ್ಡೌನ್ ಮುಗಿದ ನಂತರ ನಡೆಸಲು ಎಲ್ಲಾ ಪೂರ್ವ ಸಿದ್ಧತೆ ಕೈಗೊಂಡಿದೆ. ವಿದ್ಯಾರ್ಥಿಗಳ ಹಿತಕ್ಕಾಗಿ ಪರೀಕ್ಷೆ ನಡೆಸುವುದು ಸೂಕ್ತ ಎಂದು ಸಚಿವರು ತಿಳಿಸಿದ್ದಾರೆ.

ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳ ಶಿಕ್ಷಣ ಸಚಿವರು ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರೊಂದಿಗೆ ಶಿಕ್ಷಣ ಸಚಿವರ ವಿಡಿಯೋ ಸಂವಾದದಲ್ಲಿ ಸಚಿವ ಸುರೇಶ್ ಕುಮಾರ್ ಭಾಗವಹಿಸಿ ಮಾತನಾಡಿದ್ದಾರೆ. ಲಾಕ್ಡೌನ್ ಜಾರಿಯಲ್ಲಿರುವುದರಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ನಡೆಸಲಾಗುತ್ತಿದೆ. ಯುಟ್ಯೂಬ್ ಚಾನೆಲ್ ನಲ್ಲಿ ಮಕ್ಕಳಿಗೆ ವೇದಿಕೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...