alex Certify BIG NEWS: ಶಾಲೆ ಆರಂಭ, SSLC ಪರೀಕ್ಷೆ, ಫಲಿತಾಂಶ, ಆನ್ ಲೈನ್ ಶಿಕ್ಷಣದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ ಆರಂಭ, SSLC ಪರೀಕ್ಷೆ, ಫಲಿತಾಂಶ, ಆನ್ ಲೈನ್ ಶಿಕ್ಷಣದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬಳ್ಳಾರಿ: ಆನ್‍ಲೈನ್‍ಶಿಕ್ಷಣ ನೀಡುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತಾ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪೂರ್ವಪ್ರಾಥಮಿಕ ಶಾಲೆಗಳಿಗೆ ಆನ್‍ಲೈನ್ ಶಿಕ್ಷಣ ಯಾವುದೇ ಕಾರಣಕ್ಕೂ ನೀಡಬಾರದು; ಯಾವ ವಯಸ್ಸಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ನೀಡಬಹುದು ಎಂಬುದರ ಬಗ್ಗೆ ಸುದೀರ್ಘ ಅಭಿಪ್ರಾಯಗಳು, ಚರ್ಚೆಗಳು ನಡೆದಿದ್ದು, ಸೋಮವಾರ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದು ಹೇಳಿದ್ದಾರೆ.

ಶೈಕ್ಷಣಿಕ ವರ್ಷ ಆರಂಭ ಕುರಿತು ಸರಕಾರ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಭಿಪ್ರಾಯ ಸಂಗ್ರಹಿಸುವಂತೆ ಕೇಂದ್ರ ಸುತ್ತೋಲೆ ಮುಖಾಂತರ ತಿಳಿಸಿರುವುದರಿಂದ ಪೋಷಕರು, ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದ್ದು, ಅವುಗಳನ್ನು ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು. ರಾಜ್ಯದಲ್ಲಿ 8,48,203 ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದು, ಪರೀಕ್ಷಾ ಕೇಂದ್ರಗಳು ಪ್ರವೇಶಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ; ಜ್ವರದಂತಹ ಲಕ್ಷಣಗಳು ಕಂಡು ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ನಳಿನಿ ಅತುಲ್ ಮತ್ತಿತರರು ಇದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...