ಬೆಂಗಳೂರು: ರಾಜ್ಯದಲ್ಲಿಂದು ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮಕೈಗೊಳ್ಳಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಣ, ಆರೋಗ್ಯ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಸಹಯೋಗದಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲಾಗಿದ್ದು, ವಿದ್ಯಾರ್ಥಿಗಳಿಗೆ ಸೂಚನೆ ಪಾಲಿಸಲು ತಿಳಿಸಲಾಗಿದೆ.
ಇನ್ನು ಕಲಾದಗಿ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಾಗಲಕೋಟೆ ತಾಲೂಕಿನ ಕಲಾದಗಿ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ.