alex Certify SSLC – PUC ಫಲಿತಾಂಶ ಪ್ರಕಟಣೆ ಕುರಿತು ಸಚಿವರಿಂದ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC – PUC ಫಲಿತಾಂಶ ಪ್ರಕಟಣೆ ಕುರಿತು ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ಈಗ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ. ಜೂನ್ 18ರಂದು ಬಾಕಿ ಉಳಿದಿರುವ ಪಿಯುಸಿ ಇಂಗ್ಲೀಷ್ ಪ್ರಶ್ನೆಪತ್ರಿಕೆಯ ಪರೀಕ್ಷೆ ನಡೆಯಲಿದ್ದು, ಜೂನ್ 25ರಿಂದ ಜುಲೈ 4ರ ವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.

ಕೊರೊನಾ ಕಾರಣಕ್ಕೆ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ನೀಡುವುದರ ಜೊತೆಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೆ ಪರೀಕ್ಷಾ ಹಾಲ್ ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದರ ಮಧ್ಯೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ ನೀಡಿದ್ದು, ಜುಲೈ 8ರಂದು ಅಥವಾ ಒಂದೆರಡು ದಿನದ ಆಸುಪಾಸಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹಾಗೂ ಜುಲೈ ಅಂತ್ಯಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...