alex Certify SSLC, PUC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಮೇ 4 ರಿಂದ 17 ರವರೆಗೆ ಮೂರನೇ ಹಂತದ ಲಾಕ್ ಡೌನ್ ಮುಂದುವರೆಯಲಿದೆ. ಮೇ 17 ರ ನಂತರವೇ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗುವುದು. ಮೇ 3ರ ಬಳಿಕ ಲಾಕ್ಡೌನ್ ತೆರವಾಗುವ ನಿರೀಕ್ಷೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ಆರಂಭಿಸಲಾಗಿದೆ. ಪರಿಸ್ಥಿತಿ ಸುಧಾರಿಸಿದಲ್ಲಿ ಮೇ ಅಂತ್ಯಕ್ಕೆ ಇಲ್ಲವೆ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಸಾಧ್ಯತೆ ಇತ್ತು.

ಆದರೆ, ಮೇ 17 ರವರೆಗೂ ಲಾಕ್ ಡೌನ್ ಮುಂದುವರೆದಿರುವುದರಿಂದ ಲಾಕ್ ಡೌನ್ ಮುಗಿದ ಬಳಿಕ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗುವುದು. ಲಾಕ್ ಡೌನ್ ಕಾರಣದಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ವಿಳಂಬವಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರೆಸಲಾಗಿದೆ.  ಲಾಕ್ ಡೌನ್ ಮುಗಿದ ಕೂಡಲೇ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ಮುಗಿದ ಕೆಲವೇ ದಿನಗಳಲ್ಲಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...