alex Certify SSLC ಮತ್ತು PUC ಇಂಗ್ಲಿಷ್ ಪರೀಕ್ಷೆ, ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಮತ್ತು PUC ಇಂಗ್ಲಿಷ್ ಪರೀಕ್ಷೆ, ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಿಂತ ಮೊದಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಸಲಾಗುವುದು.

ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಬಾಕಿ ಉಳಿದಿದ್ದು ಎಸ್ಎಸ್ಎಲ್ಸಿ ಪರೀಕ್ಷೆಗಿಂತ ಮೊದಲೇ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಇಂಗ್ಲಿಷ್ ಹೊರತುಪಡಿಸಿ ಉಳಿದೆಲ್ಲ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಮೊದಲು ಇಂಗ್ಲಿಷ್ ಪರೀಕ್ಷೆ ನಡೆಸಲಾಗುವುದು. ಇದರೊಂದಿಗೆ ಮೌಲ್ಯಮಾಪನ ಕಾರ್ಯ ಆರಂಭಿಸಲಾಗುವುದು.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಿ ಮೌಲ್ಯಮಾಪನ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಸಿಇಟಿ, ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಮೊದಲು ನಡೆಸಿ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಸಾಧ್ಯತೆಯಿದ್ದು ಇದಕ್ಕಾಗಿ ಸಿದ್ಧತೆ ಆರಂಭಿಸಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...