alex Certify ಬಿಗ್ ನ್ಯೂಸ್: ಆಗಸ್ಟ್ 8 ರೊಳಗೆ SSLC ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಆಗಸ್ಟ್ 8 ರೊಳಗೆ SSLC ಫಲಿತಾಂಶ ಪ್ರಕಟ

ಬೆಂಗಳೂರು: 2019 -20 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.

ಆಗಸ್ಟ್ 8 ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 6 ಅಥವಾ 8 ರೊಳಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಪಲಿತಾಂಶ ಪ್ರಕಟಿಸಲಾಗುವುದು. ಇದಕ್ಕಾಗಿ ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ಅಂತ್ಯದವರೆಗೆ ಶಾಲೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಪಠ್ಯಪುಸ್ತಕದಲ್ಲಿ ಕೆಲವು ಭಾಗಗಳನ್ನು ಕೈಬಿಟ್ಟ ಕುರಿತಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿರುವುದರಿಂದ ನಿರ್ಧಾರ ತಡೆಹಿಡಿಯಲಾಗಿದ್ದು, ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...