alex Certify ಇಂದೇ SSLC ಫಲಿತಾಂಶ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದೇ SSLC ಫಲಿತಾಂಶ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 25 ರಿಂದ ಜುಲೈ 4 ರವರೆಗೆ ನಡೆದ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಸಚಿವ ಸುರೇಶ್ ಕುಮಾರ್ ಪರೀಕ್ಷೆ ಫಲಿತಾಂಶ ಪ್ರಕಟವಾಗಲು ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ, ತಾಂತ್ರಿಕ ಕಾರ್ಯಗಳು ಮುಗಿದಿದ್ದು, ಶನಿವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಚಿವ ಸುರೇಶ್ ಕುಮಾರ್ ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ, ದಿನಾಂಕ ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಸಚಿವರು ಆಗಸ್ಟ್ 8 ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಆದರೆ ಆಗಸ್ಟ್ 7 ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಡಿದ್ದು, ಸಚಿವರು ದಿನಾಂಕ ನಿಗದಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...