ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ನಮ್ಮನ್ನು ಬೆಳೆಸಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಇದ್ದೆವು. ನಂತರದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ನಾವೇನು ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತಂದಿಲ್ಲ ಎಂದು ಹೇಳಿದ್ದಾರೆ.
ಸಿದ್ಧರಾಮಯ್ಯನವರ ಮೇಲೆ ಮುನಿಸಿಕೊಂಡು ಕಾಂಗ್ರೆಸ್ ಪಕ್ಷ ಬಿಟ್ಟಿಲ್ಲ. ಆಗ ನಮ್ಮ ಸಮಸ್ಯೆಯನ್ನು ಅವರು ಬಗೆಹರಿಸಲಿಲ್ಲ. ಆಗ ಬಗೆಹರಿಸದೆ ಈಗ ಒದ್ದಾಡುತ್ತಿದ್ದಾರೆ ಎಂದು ಹೇಳಿದ್ದಾರೆ.