alex Certify ‘ಡಿ.ಕೆ. ಶಿವಕುಮಾರ್ ಮಾತಿಗೆ ಕಿಮ್ಮತ್ತಿಲ್ಲ, RR ನಗರದಲ್ಲಿ ಕಾಂಗ್ರೆಸ್ ಖಾಲಿ, ಮುನಿರತ್ನ ಸೋಲಿಸಲು ಸಾಧ್ಯವಿಲ್ಲ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿ.ಕೆ. ಶಿವಕುಮಾರ್ ಮಾತಿಗೆ ಕಿಮ್ಮತ್ತಿಲ್ಲ, RR ನಗರದಲ್ಲಿ ಕಾಂಗ್ರೆಸ್ ಖಾಲಿ, ಮುನಿರತ್ನ ಸೋಲಿಸಲು ಸಾಧ್ಯವಿಲ್ಲ’

ಮೈಸೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ತಾಯಿಗೆ ಮೋಸ ಮಾಡಿ ಹೋದವರು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಡಿಕೆಶಿ ಮಾತಿಗೆ ಸಿದ್ದರಾಮಯ್ಯನವರೇ ಬೆಲೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಇದ್ದೆವು. ನಮ್ಮನ್ನು ಪಕ್ಷ ಬಿಡಿಸಿದವರು ಯಾರು ಎಂದು ಪ್ರಶ್ನಿಸಿದ್ದಾರೆ. ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಇಲ್ಲ. ಶೇಕಡ 99 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಹೀಗಾಗಿ ಹೊರಗಿನಿಂದ ಜನರನ್ನು ಕರೆದುಕೊಂಡು ಬರುತ್ತಿದ್ದಾರೆ. ಹೊರಗಿನಿಂದ ಜನರನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...