ಬೆಂಗಳೂರು: ರಾಜ್ಯದಲ್ಲಿ ಇಂದು 8852 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,35,928 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 7101 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 2,42,229 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 106 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 5589 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 88,091 ಸಕ್ರಿಯ ಪ್ರಕರಣಗಳಿದ್ದು 730 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 2821 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 37,703 ಸಕ್ರಿಯ ಪ್ರಕರಣಗಳಿದ್ದು ಇವತ್ತು 27 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.