alex Certify ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ.

ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ -3 ಜಾರಿಗೊಳಿಸಿ ಹೊರಡಿಸಿದ ಮಾರ್ಗಸೂಚಿಯನ್ವಯ ವ್ಯಕ್ತಿಗಳ ಮತ್ತು ಸರಕುಗಳ ಅಂತರರಾಜ್ಯ ಚಲನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೇಳಿದ್ದು ಮಾರ್ಗಸೂಚಿಗಳನ್ನು ನೀಡಲಾಗಿದೆ.

ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರು ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ರಾಜ್ಯದ ಗಡಿ ಭಾಗ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ವೈದ್ಯಕೀಯ ತಪಾಸಣೆ ನಡೆಸಬೇಕು.

ಜಿಲ್ಲಾ ಸ್ವೀಕಾರ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಪ್ರಯಾಣಿಕರ ವರ್ಗೀಕರಣ ಮಾಡಬೇಕು. ಕೈಗಳಮೇಲೆ ಸೀಲ್ ಹಾಕಬೇಕು. 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕು ಎಂಬುದು ಸೇರಿದಂತೆ ವಿವಿಧ ನಿಬಂಧನೆಗಳನ್ನು ನೀಡಲಾಗಿದೆ.

ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಸೋಂಕಿನ ಲಕ್ಷಣಗಳು ಇದ್ದಲ್ಲಿ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರಬೇಕು. ವೈದ್ಯಕೀಯ ಸಮಾಲೋಚನೆ ಪಡೆಯಬೇಕು. ಆಪ್ತಮಿತ್ರ 14410 ಸಹಾಯವಾಣಿಗೆ ಕರೆ ಮಾಡಬೇಕು. ಕಡ್ಡಾಯವಾಗಿ ದೈಹಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ತಿಳಿಸಲಾಗಿದೆ. ಈ ಸುತ್ತೋಲೆ ರಾಜ್ಯಕ್ಕೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸುವ ವ್ಯಾಪಾರಿಗಳು, ವಿದ್ಯಾರ್ಥಿಗಳು, ಕಾರ್ಮಿಕರು, ಸಾರಿಗೆ ಮಧ್ಯಂತರ ಇತರರಿಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...