alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆಯಾಗ್ತಿದೆ ಕೊರೊನಾ ಸೋಂಕು, ಇಂದು 4471 ಜನರಿಗೆ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆಯಾಗ್ತಿದೆ ಕೊರೊನಾ ಸೋಂಕು, ಇಂದು 4471 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಇವತ್ತು 4471 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,98,378 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 52 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 10,873 ಜನ ಸಾವನ್ನಪ್ಪಿದ್ದಾರೆ. ಇಂದು 7153 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 7,00,737 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 86,749 ಜನ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು 2251 ಹೊಸ ಪ್ರಕರಣ ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 3,23,305 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 26 ಮಂದಿ ಮೃತಪಟ್ಟಿದ್ದು, ಇದುವರೆಗೆ 3714 ಜನ ಸಾವನ್ನಪ್ಪಿದ್ದಾರೆ. 2,63,607 ಜನ ಡಿಸ್ಚಾರ್ಜ್ ಆಗಿದ್ದು, 55,983 ಜನ ಚಿಕಿತ್ಸೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...