
ಬೆಂಗಳೂರು: ರಾಜ್ಯದಲ್ಲಿ ಇಂದು 2576 ಮಂದಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,29,640 ಕ್ಕೆ ಏರಿಕೆಯಾಗಿದೆ.
ಇವತ್ತು ರಾಜ್ಯದಲ್ಲಿ 29 ಮಂದಿ ಮೃತಪಟ್ಟಿದ್ದು, ಇದುವರೆಗೆ 11,221 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8334 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 7,73,595 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 44,805 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 1439 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಂಕಿತರ ಸಂಖ್ಯೆ 3,40,075 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 14 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 3888 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೆ 3,10,088 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು 26,098 ಸಕ್ರಿಯ ಪ್ರಕರಣಗಳಿವೆ.