ಬೆಂಗಳೂರು: ರಾಜ್ಯದಲ್ಲಿ ಇಂದು 7542 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 7,51,390 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 73 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 10,356 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 6,28,588 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು 1,12,427 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 3441 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಹಿತಿ ನೀಡಲಾಗಿದೆ.