ಬೆಂಗಳೂರು: ರಾಜ್ಯದಲ್ಲಿ ಇಂದು 271 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾಗಿದ್ದು, ಇವತ್ತು 464 ಮಂದಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ 3440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
2995 ಸಕ್ರಿಯ ಪ್ರಕರಣಗಳು ಇದ್ದು ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 7 ಮಂದಿ ಮೃತಪಟ್ಟಿದ್ದು ಇದುವರೆಗೆ 79 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು ಪತ್ತೆಯಾದ ಹೊಸ ಪ್ರಕರಣಗಳ ಬಗ್ಗೆ 92 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 14 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ. ಇವತ್ತು ಒಂದೇ ದಿನ ಬಳ್ಳಾರಿಯಲ್ಲಿ 97, ಬೆಂಗಳೂರು ನಗರ 36, ಉಡುಪಿ 22, ಕಲಬುರಗಿ 20, ಧಾರವಾಡ 19, ದಕ್ಷಿಣಕನ್ನಡ 17, ಬೀದರ್ 10, ಹಾಸನ, ಮೈಸೂರು ತಲಾ 9, ತುಮಕೂರು 7, ಶಿವಮೊಗ್ಗ 6, ರಾಯಚೂರು, ಉತ್ತರಕನ್ನಡ ತಲಾ 4, ಚಿತ್ರದುರ್ಗ, ರಾಮನಗರ ತಲಾ 3, ಮಂಡ್ಯ 2, ಬೆಳಗಾವಿ, ವಿಜಯಪುರ, ಕೋಲಾರದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.