ಬೆಂಗಳೂರು: ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 8 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆಎಂದಿಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 102 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7734 ಆಗಿದ್ದು, 2824 ಸಕ್ರಿಯ ಪ್ರಕರಣಗಳಿವೆ. ಇಂದು 348 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 4804 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋಂಕಿತರಲ್ಲಿ 72 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಪತ್ತೆಯಾದ ಪ್ರಕರಣಗಳಲ್ಲಿ 106 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು ಇಬ್ಬರು ಅಂತರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.