ಬೆಂಗಳೂರು: ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 7734 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿ 19, ಬೀದರ್ 12, ದಕ್ಷಿಣಕನ್ನಡ, ಧಾರವಾಡ ತಲಾ 8, ಮಂಡ್ಯ 7, ಹಾಸನ 5, ಉಡುಪಿ, ಬಾಗಲಕೋಟೆ, ಶಿವಮೊಗ್ಗ ತಲಾ 4, ದಾವಣಗೆರೆ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ತಲಾ 3, ರಾಯಚೂರು, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗಯಲಿದ ವೈದ್ಯಕೀಯ ವರದಿ ಬಂದಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 8 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 102 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.