alex Certify ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೋನಾ ಬಿಗ್ ಶಾಕ್: ಇಲ್ಲಿದೆ ಜಿಲ್ಲಾವಾರು ಸೋಂಕಿತರ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೋನಾ ಬಿಗ್ ಶಾಕ್: ಇಲ್ಲಿದೆ ಜಿಲ್ಲಾವಾರು ಸೋಂಕಿತರ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 416 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದದ್ದು, ಒಟ್ಟು ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 94 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1000 ಗಡಿ ದಾಟಿದೆ. ಒಟ್ಟು 1076 ಸೋಂಕಿತರಲ್ಲಿ 393 ಮಂದಿ ಬಿಡುಗಡೆಯಾಗಿದ್ದು 621 ಸಕ್ರಿಯ ಪ್ರಕರಣಗಳಿವೆ. 61 ಮಂದಿ ಮೃತಪಟ್ಟಿದ್ದಾರೆ. ಉಡುಪಿ, ಕಲಬುರ್ಗಿ ಬಳಿಕ ಬೆಂಗಳೂರು ನಗರ ಜಿಲ್ಲೆಯಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಒಂದು ಸಾವಿರ ಗಡಿ ದಾಟಿದೆ.

ಇವತ್ತು ಒಂದೇ ದಿನ ಬೀದರ್ ಜಿಲ್ಲೆಯಲ್ಲಿ 73, ಬಳ್ಳಾರಿ, ರಾಮನಗರ ತಲಾ 38, ಕಲಬುರ್ಗಿ 34, ಮೈಸೂರು 22, ಹಾಸನ 16, ರಾಯಚೂರು 15, ಉಡುಪಿ 13, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಧಾರವಾಡ, ಚಿಕ್ಕಬಳ್ಳಾಪುರ ತಲಾ 5 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದಕ್ಷಿಣಕನ್ನಡ, ಮಂಡ್ಯ, ಉತ್ತರಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ 4, ದಾವಣಗೆರೆ 3, ಬಾಗಲಕೋಟೆ, ಶಿವಮೊಗ್ಗ, ಗದಗ, ತುಮಕೂರು ತಲಾ 2, ಬೆಳಗಾವಿ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...