ಕೋಲಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ಸಾಧನ ಸಲಕರಣೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ಮಹಿಳೆಗೆ ಜನಿಸುವ ಮಕ್ಕಳ ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನರ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ಪ್ರೋತ್ಸಾಹ ಧನ, ಸ್ಪರ್ಧಾ ಚೇತನ, ಸಾಧನೆ ಪ್ರತಿಭೆ, ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಮತ್ತು ಸ್ವಯಂ ಉದ್ಯೋಗಕ್ಕಾಗಿ ಆಧಾರ ಸಾಲ ಯೋಜನೆ ಹಾಗೂ ನಿರಾಮಯ ಈ ಯೋಜನೆಗಳ 2020-21 ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ತಮ್ಮ ಗ್ರಾಮ ಪಂಚಾಯತಿಯ ವಿ.ಆರ್.ಡಬ್ಬ್ಯೂ. ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ. ಮತ್ತು ಜಿಲ್ಲಾ ಕಛೇರಿಯಲ್ಲಿ ಪಡೆದು ಸಲ್ಲಿಸಬಹುದಾಗಿದೆ. ಈ ಯೋಜನೆಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ: 08152-228251 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಪ ನಿರ್ದೇಶಕರ ಕಛೇರಿ, ಜಿಲ್ಲಾ ನ್ಯಾಯಾಲಯದ ಹತ್ತಿರ, ಕೋಲಾರ ಕಛೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.