alex Certify ಬಸ್ ಪಾಸ್: ವಿದ್ಯಾರ್ಥಿಗಳು, ಪೋಷಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪಾಸ್: ವಿದ್ಯಾರ್ಥಿಗಳು, ಪೋಷಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ಸೇರಿದಂತೆ ಯಾವುದೇ ಪಾಸ್ ಗೆ ಸಹಾಯಧನ ನೀಡುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಹೆಚ್ಚಿನ ದರ ಭರಿಸಬೇಕಿದೆ ಎಂದು ಹೇಳಲಾಗಿತ್ತು.

ಆದರೆ, ಈ ಬಗ್ಗೆ ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ ಬಗ್ಗೆ ಸಚಿವರು ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ ದರಗಳನ್ನು ಏರಿಕೆ ಮಾಡುವುದಿಲ್ಲ. ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವುದಿಲ್ಲ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.

ಈ ಕುರಿತಾಗಿ ಹೇಳಿಕೆ ಬಿಡುಗಡೆ ಮಾಡಿದ ಲಕ್ಷ್ಮಣ ಸವದಿ, ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ ಗಳ ದರವನ್ನು ಹೆಚ್ಚಿಸುವುದಿಲ್ಲ. ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಬಸ್ ಪಾಸ್ ದರ ಹೆಚ್ಚಿಸಲಾಗಿದೆ ಎಂಬುದು ಕೇವಲ ವದಂತಿಯಷ್ಟೇ. ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್ ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು. ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರಿಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...